

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತ 9ನೇ ವರ್ಷವೂ 100 % ಫಲಿತಾಂಶ ದಾಖಲಿಸಿದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಸಾನ್ವಿ ಎಸ್ 593 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಸುಜನ್ 582 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಸಾತ್ವಿಕ್ ಎಸ್ ಪೂಜಾರಿ 572ಅಂಕ ಗಳಿಸಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಜಂಟಿ ಕಾರ್ಯದರ್ಶಿ, ಹಾಗೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಪೌಲ್ ರೆಗೊ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜ ಎ.ಸಿ., ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.






