

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 7ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಮರಿಯಾ ವಿಯೊಲ್ಲಾ ಬರೆಟ್ಟೊ 591 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರೀಯಾ ಡಿ’ಸೋಜ 581 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶನ್ ಡಿ’ಸೋಜ 573 ಅಂಕ ಗಳಿಸಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕರೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಸ್ಟ್ಯಾನಿ ತಾವ್ರೊ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜ ಎ.ಸಿ., ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.


