ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗು ಪೌಢಶಾಲಾ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಜಂಟಿ ಪ್ರಾಯೋಜಕತ್ವದಲ್ಲಿ ದಿನಾಂಕ 05-08-2024ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ವಹಿಸಿ ಸ್ಪರ್ಧಾಳುಗಳಿಗೆ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭಾ ಸದಸ್ಯರಾದ ಪ್ರಭಾಕರ್ ವಿ. ರವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿಯವರು ಆಗಮಿಸಿ ಸ್ಪರ್ಧಾಳುಗಳಿಗೆ ಹುರಿದುಂಬಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇಲ್ಲಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಯುತಾ ಸತ್ಯನಾರಾಯಣ ಜಿ. ರವರು ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ ಪ್ರೋತ್ಸಾಹಿಸಿದರು.
ಯುವ ಜನ ಸೇವಾ ಹಾಗು ಕ್ರೀಡಾಧಿಕಾರಿ ಶ್ರೀ ಕುಸುಮಾಕರ ಶೆಟ್ಟಿಯವರು ಕಾರ್ಯಕ್ರಮ ಆಯೋಜನೆಯ ಕುರಿತು ಪ್ರಶಂಸೆಯ ಮಾತುಗಳನ್ನಾಡಿ ಸ್ಪರ್ಧಾಳುಗಳಿಗೆ ಸ್ಪೂರ್ತಿಯನ್ನು ನೀಡಿದರು.
14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು ಹಾಗೆಯೇ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿ ದ್ವಿತಿಯ ಸ್ಥಾನವನ್ನು ಗಳಿಸಿತು.
14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಹೆಚ್.ಎಮ್.ಎಮ್ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು ಹಾಗೆಯೇ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ,ಕುಂದಾಪುರ ದ್ವಿತಿಯ ಸ್ಥಾನವನ್ನು ಗಳಿಸಿತು.17ರ ವಯೋಮಾನದ ಬಾಲಕರ ವಿಭಾಗದಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು ಹಾಗೆಯೇ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದ್ವಿತಿಯ ಸ್ಥಾನವನ್ನು ಗಳಿಸಿತು.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು ಹಾಗೆಯೇ ಸೈಂಟ್ ಪಿಯುಸ್ ಘಿ ಆಂಗ್ಲ ಮಾಧ್ಯವi ಶಾಲೆ, ಹಂಗಳೂರು ದ್ವಿತಿಯ ಸ್ಥಾನವನ್ನು ಗಳಿಸಿತು.
ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿರವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಕರ ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಪ್ರತಿಮಾ ಶೆಟ್ಟಿಯವರು ವಂದನಾರ್ಪಣೆ ಸಲ್ಲಿಸಿದರು.