ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ : ಅಂತರಾಷ್ಟ್ರೀಯ ಯೋಗ ದಿನಾಚರಣೆ- ಅಂತರಾಷ್ಟ್ರೀಯ ಯೋಗಪಟು ಲಾಸ್ಯಾಳ ಯೋಗಾಸನ ಪ್ರದರ್ಶನ

JANANUDI.COM NETWORK

ಜೂ.21:ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯೋಪಾಧಾಯಿನಿ ಸಿಸ್ಟರ್‌ ತೆರೇಜ್‌ ಶಾಂತಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಯುತ ದತ್ತಾತ್ರೇಯ ನಾಯಕ್‌ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರ ಇವರು ಅತಿಥಿಗಳಾಗಿ. ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.

 ಶಾಲೆಯ ಅಂತರಾಷ್ಟ್ರೀಯ ಯೋಗ ಪಟು 6ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯಾಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿ ಆಕೆಯನ್ನು ಫಲ ಪುಷ್ಪದೊಂದಿಗೆ ಸನ್ಮಾನಿಸಿದರು. ಶಾಲಾ ದೈಹಿಕ ಶಿಕ್ಷಕ ಶ್ರೀಯುತ ರತ್ನಾಕರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು, ಶಾಲೆಯ ವಿದ್ಯಾರ್ಥಿನಿ ಹಾಗೂ ಅಂತರಾಷ್ಟ್ರೀಯ ಯೋಗಪಟು ಲಾಸ್ಯಾಳ ಯೋಗಾಸನ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದೈಹಿಕ ಶಿಕ್ಷಕ ಶ್ರೀಯುತ ರತ್ನಾಕರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೆರುಗನ್ನು ನೀಡಿದರು. ಈ ಸಭೆಯಲ್ಲಿ ಶಾಲಾ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಬಕ ಶ್ರೀಯುತ ಪ್ರಶಾಂತ್ ಲುವಿಸ್ ಧನ್ಯವಾದ ಸಮರ್ಪಿಸಿದರು.