

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಪ್ರಯೋಜಕತ್ವದಲ್ಲಿ ದಿನಾಂಕ 31-10-2022 ಸೋಮವಾರದಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಿಂಚನಾ ಹಾಸ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇವಳು ಕೋಟೇಶ್ವರದ ಉದಯ ಶೇಟ್ ಹಾಗೂ ಸವಿತಾ ದಂಪತಿಯ ಪುತ್ರಿಯಾಗಿದ್ದಾಳೆ. ಇವಳ ಈ ಸಾಧನೆಗೆ ಶಾಲಾ ಸಂಚಾಲಕರಾದ ಅತೀ ವಂದನೀಯ ಗುರುಗಳಾದ ಸ್ಟ್ಯಾನಿ ತಾವ್ರೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಎ.ಸಿ, ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.