ಕುಂದಾಪುರ, ಜು.31: ‘ಆಟ ಪಾಠ ಊಟ ಇದು ಮನುಷ್ಯನಿಗೆ ಬೇಕಾಗಿರುವ ಅಗತ್ಯವಾದ ವಿಷಯಗಳು, ಅದರಲ್ಲಿ ಮಕ್ಕಳಿಗೆ ಅಚ್ಚು ಮೆಚ್ಚಿನದು ಆಟ, ನಮ್ಮ ಎಳೆಯವಲ್ಲಿ ಇದನ್ನೆ ಶಾಲೆಯಲ್ಲಿ ನಿರೀಕ್ಷಿಸುತ್ತಿದ್ದೆವು. ಆಟಗಳಿಂದ ನಮ್ಮ ಶರೀರ ಸುಧ್ರಡವಾಗುತ್ತದೆ. ಸೋಲು ಗೆಲುವು ಇದ್ದದೆ ಆದರೆ ಆಟದಲ್ಲಿ ನಮ್ಮನು ನಾವು ತೊಡಗಿಕೊಳ್ಳಬೇಕು, ನೀವು ಆಟದಲ್ಲಿ ಶ್ರಮ ಪಟ್ಟು ಸಾಧನೆ ಮಾಡಬೇಕು, ಈ ಆಟ ಇಲ್ಲಿಗೆ ಮುಕ್ತಾಯವಾಗುವುದಿಲ್ಲ, ತಾಲ್ಲೂಕಿನಿಂದ ಜಿಲ್ಲೆ, ಜಿಲ್ಲೆಯಿಂದ ರಾಜ್ಯ, ರಾಜ್ಯದಿಂದ ರಾಷ್ಟ್ರೀಯ ಮಟ್ಟಕ್ಕೆ, ರಾಷ್ಟ್ರೀಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವಂತಹ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು, ಹಾಗೂ ಸಂತ ಮೇರಿಸ್ ಸಮುಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅ|ವಂ|ಸ್ಟ್ಯಾನಿ ತಾವ್ರೊ ಹೇಳಿದರು.
ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಸಂದೇಶ ನೀಡಿದರು. ದೈಹಿಕ ಪರಿವೀಕ್ಷಗಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ, ಕುಂದಾಪುರದ ರವೀಂದ್ರ ನಾಯಕ್ ಪ್ರಸ್ತಾವಿಕ ಭಾಷಣ ಮಾಡಿದರು. ಮುಖ್ಯ ಅತಿಥಿ ಮತ್ಸ್ಯ ಉದ್ಯಮಿ ಸತ್ಯ ಜಾವಗಲ್ ಮಾತನಾಡಿ “ಕ್ರೈಸ್ತರು ಶಿಕ್ಷಣ ನೀಡುವಲ್ಲಿ ಭಾರೀ ಮುಂದು, ಶಿಕ್ಷಣಕ್ಕಾಅಗಿ ನಾವು ಇವರಿಗೆ ಸಹಾಯ ಹಸ್ತವನ್ನು ನೀಡಬೇಕು. ಕ್ರೈಸ್ತ ಧರ್ಮಗುರುಗಳ ಒಡನಾಟ ಒಂದು ಭಾಗ್ಯವೇ ಸರಿ’ ಎಂದು ಅವರ ಭಾವನೆಯನ್ನು ವ್ಯಕ್ತಪಡಿಸಿದರು. ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಗಾಗಿ ಅವರು ಒಂದು ಟೇಬಲ್ ಟೆನ್ನಿಸ್ ಟೇಬಲನ್ನು ದಾನವಾಗಿ ನೀಡಿದ್ದು, ಅದನ್ನು ಅವರು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು. ಅವರ ಪರಿಚಯವನ್ನು ಶಿಕ್ಷಕ ಪ್ರಶಾಂತ್ ರೇಬೆರೊ ನೀಡಿದರು. ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಸಂತಮೇರಿಸ್ ವಿದ್ಯಾ ಸಂಸ್ಥೆಯವರು ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಿರ್ವಹೈಸುತ್ತಾರೆ ಎಂದು ಶ್ಲಾಘಿಸಿದರು. ವೇದಿಕೆಯಲ್ಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಮೇರಿಸ್ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ರೆಶ್ಮಾ ಫೆರ್ನಾಂಡಿಸ್, ಸಂತ ಮೇರಿಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಅಸುಂಪ್ತಾ ಲೋಬೊ, ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಡೋರಾ ಡಿಸೋಜಾ, ಹೋಲಿ ರೋಜರಿ ಕಿಂಟರ್ ಗಾರ್ಟನ್ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಾ ಡಿಆಲ್ಮೇಡಾ, ಸಂತ ಮೇರಿಸ್ ಸಮುಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ, ಶಾಂತಿ ರಾಣಿ ಬಾರೆಟ್ಟೊ, ಸ್ಪರ್ಧೆಯ ಸಹಾಯಕರಾಗಿ ನಿಶ್ಚಿತಾ ಶೆಟ್ಟಿ ಮತ್ತು ಶ್ರೀಕಾಂತ್ ಉಪಸ್ಥಿತರಿದ್ದರು.
ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಧರ್ಮಭಗಿನಿ ತೆರೆಜಾ ಶಾಂತಿ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಕ ರತ್ನಾಕರ ಶೆಟ್ಟಿ ನಿರೂಪಿಸಿದರು. ಶಿಕ್ಷಕಿ ಪ್ರತಿಬಾ ಶೆಟ್ಟಿ ವಂದಿಸಿದರು.
ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಬಾಲಕರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ದ್ವೀತಿಯ ಸ್ಥಾನ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ಬಾಲಕಿಯರ ವಿಭಾಗದಲ್ಲಿ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಸ್ಥಾನ, ದ್ವೀತಿಯ ಸ್ಥಾನ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ.
17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ದ್ವೀತಿಯ ಸ್ಥಾನ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ಬಾಲಕಿಯರ ವಿಭಾಗದಲ್ಲಿ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಪ್ರಥಮ ಸ್ತಾನ, ಬಾಲಕಿಯರ ವಿಭಾಗದಲ್ಲಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರು ಪಡೆದಿರುತ್ತಾರೆ.