

ಕುಂದಾಪುರ, ನ.5: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ನ. 5 ರಂದು ರಕ್ಷಕ ಶಿಕ್ಷಕ ಸಭೆ ಹಾಗೂ ಮೆದುಳು ಜ್ವರದ ಮಾಹಿತಿ ಕಾರ್ಯಗಾರ ಕಾರ್ಯಕ್ರಮವು ಸೈಂಟ್ ಮೇರಿಸ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹಾಗೂ ಶಾಲೆಯ ಜಂಟಿ ಕಾರ್ಯದರ್ಶಿಯಾಗಿರುವ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ವೈದ್ಯಾಧಿಕಾರಿಗಳಾಗಿರುವ ಡಾ. ಶಿಶಿರ್ ಪೆÇೀಷಕರಿಗೆ ಮೆದುಳು ಜ್ವರದ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ಸಭೆಯಲ್ಲಿ ಹಾಜರಿದ್ದ ಸುಮಾರು 300 ಮಂದಿ ಪೆÇೀಷಕರಿಗೆ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಜ್ ಶಾಂತಿ ಎ.ಸಿ ಯವರು ಶಾಲೆಯ ರಜತ ಮಹೋತ್ಸವದ ಕಾರ್ಯಕ್ರಮದ ಬಗ್ಗೆ ಹಾಗೂ ಶಾಲೆಯ ಇತಿಹಾಸದ ಬಗ್ಗೆ ತಿಳಿಸಿದರು. ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ಶೆಟ್ಟಿಯವರು ಶಾಲೆಯ ಶೈಕ್ಷಣಿಕ ವರದಿಯನ್ನು ವಾಚಿಸಿದರು. ಶಾಲೆಯ ಆಯಾಯ ವಿಷಯಗಳ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಕರಾಗಿರುವ ಶ್ರೀ ರತ್ನಾಕರ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕ ಶ್ರೀ ಲುವಿಸ್ ಪ್ರಶಾಂತ್‍ರವರು ಸ್ವಾಗತಿಸಿದರು, ಶಿಕ್ಷಕಿ ಶ್ರೀಮತಿ ರಮ್ಯಾ ಹೆಗ್ಡೆರವರು ಧನ್ಯವಾದ ಅರ್ಪಿಸಿದರು.













