ನಂದಳಿಕೆ : ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನ ಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 23ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಹೊಂಗನಸು” ವಿಶೇಷ ಕಾರ್ಯಕ್ರಮದ ಮೂಲಕ ಮಾತನಾಡಿದರು.
ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಭಜನಾ ಸಮಿತಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಲಲಿತಾ ಆಚಾರ್ಯ, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್ ಮೊದಲಾದವರಿದ್ದರು. ಕೋಶಾಧಿಕಾರಿ ಅಶ್ವಿನಿ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು.