ಕೋಲಾರ,ಸೆ.22: ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೈ.ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಂತಹ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ವೈ.ಶಿವಕುಮಾರ್ ಬೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ರಾಮಸಂದ್ರ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಅಪ್ಪಸಂದ್ರ ರಘು, ನದೀಂ, ಪಶುಸಂಗೋಪನಾ ಹಾಗೂ ಮೀನುಗಾರಿಕೆ ಸಮಿತಿ ಸದಸ್ಯ ಗಾಜಲದಿನ್ನೆ ರಮೇಶ್, ಅಚ್ಚಟ್ನಹಳ್ಳಿ ಮನು, ಚಿನ್ನಾಪುರ ನಾರಾಯಣಸ್ವಾಮಿ, ನರಸಾಪುರ ನವೀನ್, ಗಾಜಲದಿನ್ನೆ ನವೀನ್, ಆರೀಫ್ಉಲ್ಲಾ, ಬಿಲ್ಡರ್ ರಮಣಾರೆಡ್ಡಿ ಇನ್ನಿತರರು ಉಪಸ್ಥಿತರಿದ್ದರು.