ಉನ್ನಾವ್: ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಲಖನೌ-ಆಗ್ರಾ ಎಕ್ಸ್ಪ್ರೆಸ್ ವೇ ನಲ್ಲಿ ಬಿಹಾರದ ಶಿವಘಡದಿಂದ ದೆಹಲಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಬೆಹತಾ ಮುಜಾವರ್ ಪೊಲೀಸ್ ಠಾಣಾ ವ್ಯಾಪ್ತಿತ ಏರ್ಸ್ಟ್ರಿಪ್ನಲ್ಲಿ ಟ್ಯಾಂಕರ್ಗೆ ಅಪ್ಪಳಿಸಿ ಈ ಭೀಕರ ದುರಂತ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿದ್ದು, ಅಪಘಾತದ ಭೀಕರತೆಯ ಸನ್ನಿವೇಶಕ್ಕೆ ಇದು ಸಾಕ್ಷಿಯಾಗಿತ್ತು.ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯ ಕೈಗೊಂಡರು.ಹಿರಿಯ ಪೊಲೀಸ್ ಅಧಿಕಾರಿ ಅರವಿಂದ್ಚೌವರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.