
ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ, ಸವಿತಾ ಮತ್ತು ಇತರ ಹಲವರು ಗಾಯಗೊಂಡಿದ್ದಾರೆ.
ಸಾನೂರು ಜಂಕ್ಷನ್ನಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರ್ಕಳದಿಂದ ಮೂಡುಬಿದಿರೆಯತ್ತ ತೆರಳುತ್ತಿದ್ದ ಬಸ್ಸು, ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ರಮಾನಾಥ ರೈ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್ ಮತ್ತು ಕಾರಿನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ.
ಗಾಯಾಳುಗಳನ್ನು ರಕ್ಷಿಸಲು ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾಗಿದ್ದಾರೆ.


