

ಬೆಳಗಾವಿ: ಚಾವ್ಹಾಟ್ ಗಲ್ಲಿಯಲ್ಲಿ ಮನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ.
ಮೃತಪಟ್ಟವರು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ತಿಳಿದು ಬಂದಿದೆ.ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ ಎಂದು ಹೇಳಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗಲಿ ಪ್ರಿಡ್ಜ್ ಗೆ ಬೆಂಕಿ ಆವರಿಸಿ ಪ್ರಿಡ್ಜ್ ಸ್ಪೋಟಗೊಂಡು ಪ್ರಿಡ್ಜ್ ಹತ್ತಿರದಲ್ಲೆ ಮಲಗಿದ ಕಾರಣ ಈ ದುರಂತ ನಡೆದಿದೆ ಎಂದು ಅನುಮಾನಿಸಲಾಗಿದೆ.


