ಇದೀಗ ಹುಬ್ಬಳಿಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಐವರ ಸಾವು; ರಾಜ್ಯದಲ್ಲಿ ಮರುಕಳಿಸುತ್ತಿರುವ ಆಕ್ಸಿಜನ್ ದುರಂತಗಳು

JANANUDI.COM NETWORK

ಹುಬ್ಬಳ್ಳಿ,ಮೇ 05: ಚಾಮರಾಜನಗರ ಹಾಗೂ ಕಲಬುರಗಿಯಲ್ಲಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಪ್ರಕರಣದ ಹುಬ್ಬಳ್ಳಿಯಲ್ಲಿ  ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಹುಬ್ಬಳ್ಳಿಯ ಲೈಫ್’ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೇರಿದಂತೆ ಐವರು ಸೋಂಕಿತರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.   

    ನಿನ್ನೆ ಸಂಜೆ ಲೈಫ್ ಲೈನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿಯೇ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಗಳು ಆರೋಪಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜವಾಯಿಸಿದ್ದಾರೆ. ಸಾವಿನ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಆದರೆ, ಈ ಆರೋಪವನ್ನು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ನಿರಾಕರಿಸಿದ್ದಾರೆ