ಮಂಡ್ಯ: 2008-09 ಮತ್ತು 2011-12ರ ಅವಧಿಯಲ್ಲಿ ಮೈಷುಗರ್ ಅಧ್ಯಕ್ಷರಾಗಿದ್ದ ಮಂಡ್ಯದ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್
ಯಡಿಯೂರಪ್ಪ ಅವರ ಅತ್ಯಾಪ್ತನಾಗಿರುವ ನಾಗರಾಜಪ್ಪನ ವಿರುದ್ಧ ಕೇಳಿ ಬಂದಿದ್ದ ನೂರಾರು ಕೋಟಿ ಅಕ್ರಮ ಮತ್ತು ಭ್ರಷ್ಟಾಚಾರ ಆರೋಪ
ತನಿಖೆಯಿಂದ ಸಾಬೀತಾಗಿದೆ. ತನ್ನ ಅಧ್ಯಕ್ಷತೆಯ ಅಧಿಕಾರವಧಿಯಲ್ಲಿ ಮೈಷುಗರ್ ಕಾರ್ಖಾನೆ ಬರೋಬ್ಬರಿ ₹121 ಕೋಟಿಗಳಷ್ಟು ನಷ್ಟವನ್ನು ಉಂಟು ಮಾಡಿರುವುದು ಉಪ ಲೋಕಾಯುಕ್ತರ ತನಿಖೆಯಿಂದ ಸಾಬೀತಾಗಿದ್ದು ಇದೀಗ ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಪಾನೆ ಮೈಶುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪನಿಂದ ನಷ್ಟದ ಹಣ ವಸೂಲಿ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಆಪಾದಿತ ನಾಗರಾಜಪ್ಪನ ಆಸ್ತಿ ಗುರುತಿಗೆ ಮಂಡ್ಯ ಜಿಲ್ಲಾಧಿಕಾರಿಗೆ ಮೈಷುಗರ್ ಕಾರ್ಯಾನೆಯ ವ್ಯವಸ್ಥಾಪಕ ನಿರ್ದೇಶಕ ಪತ್ರ ಬರೆದಿದ್ದು
ನಾಗರಾಜಪ್ಪನ ಸ್ಥಿರಾಸ್ತಿ ಚರಾಸ್ತಿ ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ. ಲೋಕಾಯುಕ್ತ ತನಿಖೆಯಲ್ಲಿ ಮಾಜಿ ಅಧ್ಯಕ್ಷ ನಾಗರಾಜಪ್ಪ ನಡೆಸಿದ ಅಕ್ರಮ, ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷನಿಂದ ನಷ್ಟದ ಹಣ ವಸೂಲು ಮಾಡಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ.
2008ರಲ್ಲಿ ಮುಖ್ಯಮಂತ್ರಿಯಾಗಿದ್ವ ಬಿಜೆಪಿ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಿ ನಾಗರಾಜಪ್ಪ ಮೈಶುಗರ್.
ಕಾರ್ಪಾನೆ ಅಧ್ಯಕ್ಷರಾಗಿದ್ದರು. ನಾಗರಾಜಪ್ಪ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಪರಮಾಷ್ಟನಾಗಿದ್ದಾನೆ. ತಾನು ಅಧ್ಯಕ್ಷನಾಗಿದ್ದ
ಅವಧಿಯಲ್ಲಿ ನಾಗರಾಜಪ್ಪ ಹೊಸ ಮಿಲ್ ಖರೀದಿ, ಡಿಸ್ಟಿಲರಿ ಮಾರಾಟ-ಸೋರಿಕೆ, ಮೈ ರಮ್, ಮೈ ವಿಸ್ಕಿ ಸಕ್ಕರೆ ಮಾರಾಟದಲ್ಲಿ ಭಾರಿ ಅಕ್ರಮ,
ಭ್ರಷ್ಟಾಚಾರ ಎಸಗಿದ್ದಾನೆ, ಅಷ್ಟೇ ಅಲ್ಲದೇ ನಾಗರಾಜಪ್ಪ ಮೈಶುಗರ್ ಅಧ್ಯಕ್ಷರಾಗಿದ್ದ ವೇಳೆ ಕಾರ್ಪಾನೆಗೆ 121 ಕೋಟಿ ರೂ. ನಷ್ಟ ಉಂಟಾಗಿತ್ತು ಎಂಬ ಆರೋಪವೂ ಕೇಳಿಬಂದಿತ್ತು. ಇನ್ನು ನಾಗರಾಜಪ್ಪ ನಡೆಸಿದ ಭ್ರಷ್ಟಾಚಾರದ ವಿರುದ್ಧ ತನಿಖೆಗೆ ಅಂದಿನ ಮುಖ್ಯಮಂತ್ರಿ ಸದಾನಂದಗೌಡ ನೇತೃತ್ವದ ಸರ್ಕಾರ ಲೋಕಾಯುಕ್ತಕ್ಕೆ ಪ್ರಕರಣವನ್ನು ವಹಿಸಿತ್ತು. ಲೋಕಾಯುಕ್ತ ತನಿಖೆ ವೇಳೆ ಅಕ್ರಮ, ಭ್ರಷ್ಟಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಗರಾಜಪ್ಪನಿಂದ ನಷ್ಟದ ಹಣ ವಸೂಲಿ ಮಾಡಿ, ಸಿವಿಲ್ ಪ್ರಕರಣ ದಾಖಲಿಸಲು ಲೋಕಾಯುಕ್ತ ಆದೇಶಿಸಿತ್ತು.
ಆದರೆ ಲೋಕಾಯುಕ್ತ ನ್ಯಾಯಾಧೀಶರ ಆದೇಶ ಪಾಲಿಸಲು ಈ ಹಿಂದಿನ ಸರ್ಕಾರ ಹಿಂದೇಟು ಹಾಕಿತ್ತು. ಆದರೆ ಇದೀಗ ಹಾಲಿ ಸಿದ್ದರಾಮಯ್ಯ
ಸರ್ಕಾರ ಪ್ರಕರಣ ದಾಖಲಿಸಲು ಮುಂದಾಗಿದೆ. ಹೀಗಾಗಿ ಮೈಷುಗರ್ ಕಾರ್ಪಾನೆಗೆ ಕೋಟ್ಯಂತರ ರೂಪಾಯಿ ವಂಚಿಸಿ ಅಕ್ರಮ. ಎಸಗಿದ
ನಾಗರಾಜಪ್ಪನ ಮತ್ತು ಆತನ ಕುಟುಂಬದ ಆಸ್ತಿ ವಿವರದ ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮೈಶುಗರ್ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಪತ್ರ ಬರೆದಿದ್ದಾರೆ.