ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಪುರ: ರೈತರು ತಮ್ಮ ಕ್ಷೇತ್ರದಲ್ಲಿ ಜೇನು ಸಾಕಾಣಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲ್ಲೂಕು ತೊಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತೋಟಗಾರಿಕಾ ಕಚೇರಿ ಸಭಾಂಗಣದಲ್ಲಿ ಬುಧವಾರ ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಜೇನ್ನೊಣಗಳು ಹೂಗಳ ಪರಾಗಸ್ಪರ್ಶಕ್ಕೆ ಸಹಕರಿಸುತ್ತವೆ. ಇದರಿಂದ ಹಣ್ಣಿನ ಬೆಳೆಗಳಲ್ಲಿ ಅಧಿಕ ಫಸಲು ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ತೋಟಗಾರಿಕಾ ಸಹಾಯಕ ನಿರ್ಧೇಶಕ ಎ.ಬೈರಾರೆಡ್ಡಿ ಮಾತನಾಡಿ, ಜೇನು ಕಾಕಾಣಿಕೆ ಮಾಡುವ ರೈತರಿಗೆ ತೋಟಗಾರಿಕಾ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಜೇನು ಸಾಕಾಣಿಕೆ ಪೆಟ್ಟಿಗೆ ಖರೀದಿಸಲು ಆರ್ಥಿಕ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು. ಅರ್ಹ ಫಲಾನುಭವಿಗಳು ಈ ಸೌಲಭ್ಯ ಪಡೆದುಕೊಂಡು ಜೇನು ಸಾಕಾಣಿಕೆ ಮಾಡಬೇಕು ಎಂದು ಹೇಳಿದರು.
ತೋಟಗಾರಿಕೆ ಅಧಿಕಾರಿಗಳಾದ ಮಂಜುನಾಥ್, ಹರೀಶ್ ಕುಮಾರ್, ರಮ್ಯರಾಣಿ, ನರಸಿಂಹಯ್ಯ, ಮುರಳಿ, ಈಶ್ವರ್, ವೇಣು ಇದ್ದರು.