JANANUDI.COM NETWORK

ಕುಂದಾಪುರ,ಜೂ.1: ಭಾರತೀಯ ರೆಡ್ ಕ್ರಾಸ್ ರಾಜ್ಯದ ಶಾಖೆಯಿಂದ ಕೊಡ ಮಾಡಲ್ಪಟ್ಟ ಹೈಪೋ ಆಕ್ಸಿಜನ್ ಯಂತ್ರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇಂದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಮಿಶನರ್ ರಾಜು ಕೆ. ಕೋವಿಡ್ ಇನ್ಚಾರ್ಜ್ ಡಾ.ನಾಗೇಶ್, ಕುಂದಾಪುರ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಬರ್ಟ್ ರೆಬೆಲ್ಲೊ, ಕುಂದಾಪುರ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ್ ಶೆಟ್ಟಿ ಉಪಾಧ್ಯಕ್ಷ ಡಾ.ಉಮೇಶ್ ಪುತ್ರನ್, ಕಾರ್ಯದರ್ಶಿ ವೈ. ಸೀತಾರಾಮ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಡಾ.ಸೋನಿ ಮತ್ತು ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ರಾಜ್ಯದ ಶಾಖೆಗೆ ಧನ್ಯವಾದಗಳನ್ನು ನೀಡಲಾಯಿತು.

