ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದರೆ ಆಗ ಸಾಮಾಜಿಕ ಮನ್ನಣೆ ದೊರೆಯುತ್ತದೆ: ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ: ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಆಗ ಸಾಮಾಜಿಕ ಮನ್ನಣೆ ದೊರೆಯುತ್ತದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಸ್ನೇಹ ಸಂಗಮ ಟ್ರಸ್ಟ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿಶ್ವ ಎಂಜಿಯರ್‍ಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಖ್ಯಾತ ಎಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರು ತಮ್ಮ ಅಪ್ರತಿಮ ಪ್ರತಿಭೆಯಿಂದ ವಿಶ್ವಮಾನ್ಯರಾಗಿದ್ದಾರೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ರಾಜ್ಯಕ್ಕೆ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ. ಇದು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಾಂಘಿಕ ಪ್ರಯತ್ನದ ಫಲ. ಮುಂದೆ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿ, ಸ್ನೇಹ ಸಂಗಮ ಟ್ರಸ್ಟ್ ಒಂದು ಸಮಾನ ಮನಸ್ಕರ ಸೇವಾ ಸಂಸ್ಥೆಯಾಗಿದೆ. ಟ್ರಸ್ಟ್ ಮೂಲ ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಒಂದು ಪ್ರೋತ್ಸಾಹದ ಮಾತು ಮಕ್ಕಳ ಸಾಮಥ್ರ್ಯವನ್ನು ದ್ವಿಗುಣಗೊಲಿಸುತ್ತದೆ. ಈ ಕಾರ್ಯದಲ್ಲಿ ಕೈಜೋಡಿಸಿರುವ ಎಲ್ಲರೂ ಅಭಿನಂದನಾರ್ಹರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನೆನೆಪಿನ ಕಾಣಿಕೆ ನೀಡಲಾಯಿತು.
ಟ್ರಸ್ಟ್ ಅಧ್ಯಕ್ಷೆ ನಾಗವೇಣಿ ರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಕಾರ್ಯಪಾಲಕ ಎಂಜಿನಿಯರ್‍ಗಳಾದ ಎಂ.ಕೆ.ಹುಸೇನ್ ಸಭಾಬ್, ನಾರಾಯಣಸ್ವಾಮಿ, ಕೆವಿಸಿ ರೆಡ್ಡಿ, ರಾಮು ಇದ್ದರು.