ಶ್ರೀನಿವಾಸಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನ ಕೆರೆಯಲ್ಲಿ ಹಮ್ಮಿಕೊಂಡಿದ್ದು.
ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ಪ್ರಕಾಶ್ ಕುಮಾರ್ ಗಿಡ ನಾಟಿ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರತ್ಯಕ್ಷವಾಗಿ ಪರಿಸರವನ್ನ ರಕ್ಷಣೆ ಮಾಡಿಕೊಂಡರೆ ಪರೋಕ್ಷವಾಗಿ ನಮ್ಮನ್ನು ನಾವು ರಕ್ಷಣೆ ಮಾಡಿಕೊಂಡಂತೆ ಎಂಬ ಮಾತನ್ನು ಹೇಳುತ್ತಾ.
ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ, ನಗರೀಕರಣ ಎಂಬ ಹೆಸರಿನಲ್ಲಿ ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಾ ಕಲುಷಿತ ಗಾಳಿ, ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗಲು ಪರೋಕ್ಷವಾಗಿ ನಾವೇ ಕಾರಣಿ ಕರ್ತರಾಗಿದ್ದೇವೆ ಇನ್ನಾದರೂ ಎಚ್ಚೆತ್ತುಕೊಂಡು ಗಿಡ ನೆಟ್ಟು ಮರವನ್ನಾಗಿ ಬೆಳೆಸಿ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳೋಣ ಎಂದು ಹೇಳಿದರು
ಈ ಸಂದರ್ಭದಲ್ಲಿ ಊರಿನ ಗಣ್ಯರಾದ ಶಂಕರ್ ರೆಡ್ಡಿ, ಮದ್ದಿರೆಡ್ಡಿ, ಅಶ್ವಥ್ ರೆಡ್ಡಿ, ಹಾಗೂ ವಲಯದ ಮೇಲ್ವಿಚಾರಕರಾದ ಉಮೇಶ್, ಕೃಷಿ ಮೇಲ್ವಿಚಾರಕರದ ರಮೇಶ್, ಸೇವಾ ಪ್ರತಿನಿಧಿ ನಾಗರತ್ನಮ್ಮ ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.