

ಕುಂದಾಪುರ (ಫೆ.27) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗಾಗಿ “ ಅಭ್ಯಾಸ ಕೌಶಲ ಮತ್ತು ಸಮಯ ಪಾಲನೆ “ ಕುರಿತಾಗಿ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ , ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ರವರು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಉತ್ತಮ ಪರಿಪಾಠಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎನ್ನುವುದರ ಕುರಿತಾಗಿ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ಕವಿತಾ ಎಸ್ ಕಾರ್ಯಕ್ರಮ ನಿರೂಪಿಸಿದರು.
