ಶ್ರೀನಿವಾಸಪುರ: ಸಮಾಜ ನಿರ್ಮಾಣ ಕಾರ್ಯದಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಪಾತ್ರ ಹಿರಿದು.ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಅನೇಕ ಸಂತರು ಸಾಮಾಜಿಕ ಬದಲಾವಣೆತೆ ತಮ್ಮದೇ ಆದ ರೀತಿಯಲ್ಲಿ ಶ್ರಮಿಸಿದ್ದಾರೆ. ಆ ಸಾಲಿನಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅಗ್ರಗಣ್ಯರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಮನೋಹರ ಮಾನೆ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ ಕೈ ಮುಗಿದರು.
ಉಪ ತಹಶೀಲ್ದಾರ್ ಬಲ ರಾಮಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜುನಾಥರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಂಜಲಮ್ಮ, ಅಬಕಾರಿ ಇಲಾಖೆ ಇನ್ಸ್‍ಪೆಕ್ಟರ್ ರೋಹಿತ್, ಗುರುರಾಜರಾವ್,ಚುನಾವಣೆ ವಿಭಾಗದ ಶಿರಸ್ತೇದಾರ್ ಕಿರಣ್, ಶಾಖಾಧಿಕಾರಿ ಲೋಕೇಶ್, ಮತಗಟ್ಟೆ ಅಧಿಕಾರಿ ವಿ.ತಿಪ್ಪಣ್ಣ, ಕಂದಾಯ ನಿರೀಕ್ಷಕ ಜನಾರ್ಧನ್, ಆಹಾರ ನಿರೀಕ್ಷಕ ಗುರುರಾಜರಾವ್, ಗ್ರಾಮ ಲೆಕ್ಕಾಧಿಕಾರಿಗಳಾದ ವಸುಂದರಾದೇವಿ, ಹರಿ ಮತ್ತಿತರರು ಇದ್ದರು.