

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.