


ಶ್ರೀನಿವಾಸಪುರ : ದ್ವಿತೀಯ ಪಿ ಯು ಸಿ 2023-24 ನೇ ಸಾಲಿನ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟವಾಗಿದ್ದು ಪಟ್ಟಣದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿ ಜುವೇರಿಯ ಎಂಬ ವಿದ್ಯಾರ್ಥಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 583 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರೆ ವಾಣಿಜ್ಯ ವಿಭಾಗದಲ್ಲಿ ಉಮಾ ಎಂಬ ವಿದ್ಯಾರ್ಥಿ 600 ಅಂಕಗಳಿಗೆ 587 ಅಂಕಗಳನ್ನು ಪಡೆದು ತಾಲ್ಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಾಲೇಜು ಅಧ್ಯಕ್ಷ ಎಸ್.ಸಿ. ಮುರಳಿನಾಥ್, ಕಾಲೇಜಿನ ಕಾರ್ಯದರ್ಶಿ ಎಸ್.ಸಿ.ಅಮರನಾಥ್.ಪ್ರಾಂಶುಪಾಲ ಸುಬ್ರಂಮಣಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕಾಲೇಜು ಅಧ್ಯಕ್ಷ ಎಸ್.ಸಿ.ಮುರಳಿನಾಥ್ ಮಾತನಾಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವಂತದ್ದು ಸಾಮಾನ್ಯ ವಿಷಯವಲ್ಲ ವಿದ್ಯಾರ್ಥಿಗಳು ಈ ಅಂಕಗಳನ್ನು ಪಡೆಯಲು ಶಾಲೆಯ ಸಿಬ್ಬಂದಿ ವರ್ಗ ಹಾಗೂ ಪೋಷಕರ ಪರಿಶ್ರಮ ಬಹಳ ಮುಖ್ಯವಾದದ್ದು ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಫಲಿತಾಂಶವನ್ನು ನೀಡುತ್ತೇವೆ ಗ್ರಾಮೀಣ ಭಾಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಹೆತ್ತ ತಂದೆ ತಾಯಿ ಹಾಗೂ ಕಾಲೇಜಿಗೆ ಕೀರ್ತಿ ತರಬೇಕೆಂದು ಶುಭ ಕೋರಿದರು.