ಶ್ರೀನಿವಾಸಪುರ : ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡುವ ವ್ಯವಸ್ಥೆ ಮಾಡಲು ಇಚ್ಚಿಸಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಆವರಣದ ಮುಂಭಾಗದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಕೃಷಿ ಪರಿಕರಗಳನ್ನು ಅರ್ಹ ಫಲಾನುಭವಿಗಳಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು.
ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದಕ್ಕಾಗಿ ಇಂದು ನಾನು ಅವರ ಋಣ ತೀರಿಸುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಬಡವರಿಗೆ ಮನೆಗಳ ನಿರ್ಮಾಣ ಸೇರಿದಂತೆ ಸಾರ್ವಜನಿಕರಿಗೆ ಬೇಕಾದ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡಲು ಶ್ರಮಿಸುತ್ತಿದ್ದೇನೆ ಎಂದರು.
ಕೃಷಿ ಯಂತ್ರೋಪಕರಣಗಳನ್ನು ರಿಯಾಯತಿ ಧರದಲ್ಲಿ ನೀಡಲಾಯಿತು. ಹಾಗು ಎನ್ಎಂಎಸ್ಎ ಆರ್ಎಡಿ ಯೋಜನೆಯಡಿಯಲ್ಲಿ ಜಾನುವಾರು ಘಟಕದ ಅಡಿಯಲ್ಲಿ ಮಂಜೂರಾತಿ ಪತ್ರವನ್ನು ವಿತರಿಸಿದರು.
ರೈತರಿಗೆ ಹಾಗು ಸಾರ್ವಜನಿಕರಿಗೆ ಸಂಬಂದಿಸಿದಂತೆ ಇರುವ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ಇತ್ಯರ್ಥ ಮಾಡಿಕೊಡುವಂತೆ ತಹಶೀಲ್ದಾರ್, ಇಒ ರವರಿಗೆ ಸೂಚಿಸಿದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎ.ಎನ್.ರವಿ, ಅಂಬೇಡ್ಕರ್ ನಿಗಮದ ನಿರ್ದೇಶಕಿ ಪ್ರತಿಮಾ, ಪುರಸಭೆ ಉಪಾಧ್ಯಕ್ಷೆ ಸುನಿತಾ, ಸದಸ್ಯ ಬಿ.ವಿ.ರೆಡ್ಡಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ಕೃಷಿ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಕೃಷಿ ಅಧಿಕಾರಿ ಈಶ್ವರ್, ಜಿ.ಪಂ.ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ, ಮುಖಂಡರಾದ ತೂಪಲ್ಲಿ ಮಧುಸೂದನರೆಡ್ಡಿ, ಕೊತ್ತೂರು ಅಮರನಾಥರೆಡ್ಡಿ , ಪೂಲ್ಶಿವಾರೆಡ್ಡಿ, ಮುನೆಪ್ಪ, ಅಂಬೇಡ್ಕರ್ಪಾಳ್ಯ ರವಿ, ಒಳಗೇರನಹಳ್ಳಿ ಎಸ್.ರಮೇಶ್ಕುಮಾರ್,ಶ್ರೀನಾಥ್, ಮನು, ಶಫಿವುಲ್ಲಾ ಇದ್ದರು.