

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 25 ನೇ ಬ್ಯಾಚ್ ಸ್ನಾತಕೋತ್ತರ ಕೋರ್ಸ್‍ನ್ನು ದಿನಾಂಕ 15.05.2023 ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಮುಖ್ಯ ಅತಿಥಿಗಳಾಗಿ ರೋಸಿ ರೋಯಲ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಬೆಂಗಳೂರು ಇಲ್ಲಿನ ಪ್ರಾಂಶುಪಾಲರಾದ ಡಾ. ಸೈಯದ್ ಸೆದೀಕ್ ಆಹ್ಮದ್, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ ರೋಶನ್ ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ. ಪ್ರಭು ಕಿರಣ್, ಫಾದರ್ ಮುಲ್ಲರ್ ಹೋಮಿಯೋಪಥಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಗಿರೀಶ್ ನಾವಡ ಯು.ಕೆ., ಕಾಲೇಜಿನ ಯು.ಜಿ. ಹಾಗೂ ಪಿ.ಜಿ. ಕೋರ್ಸ್ ಸಲಹೆಗಾರರಾದ ಡಾ. ಎಮ್. ಕೆ. ಕಾಮಥ್, ಪಿ.ಜಿ. ಶೈಕ್ಷಣಿಕ ಉಸ್ತುವಾರಿ ಡಾ. ಜ್ಯೋಶ್ನಾ ಶಿವಪ್ರಸಾದ್ ಹಾಗೂ 25ನೇ ಬ್ಯಾಚ್ ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಇವರುಗಳು ಭಾಗವಹಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ. ಪ್ರಭು ಕಿರಣ್‍ರವರು ನೆರೆದಿರುವ ಎಲ್ಲರನ್ನು ಸ್ವಾಗತಿಸಿ ಹೊಸ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‍ಗಳ ಆರಂಭದ ಚರಿತ್ರೆಯನ್ನು ನೆನಪಿಸುತ್ತಾ, ತಮ್ಮ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಸೂಕ್ಷ್ಮತೆ ಹಾಗೂ ಸಂವೇದನೆಯನ್ನು ಕಾಪಾಡಿಕೊಳ್ಳುವಂತೆ ಹುರಿದುಂಬಿಸಿದರು.
ಮುಖ್ಯ ಅತಿಥಿಗಳಾದ ಡಾ. ಸೈಯದ್ ಸೆದೀಕ್ ಆಹ್ಮದ್, ರವರು ತಮ್ಮ ಸಂದೇಶದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಸಂಶೋಧನೆಯತ್ತ ಗಮನ ಹರಿಸುವಂತೆ ಪ್ರೇರೇಪಿಸಿದರು. ಆಡಳಿತಾದಿಕಾರಿಯಾದ ವಂದನೀಯ ರೋಶನ್ ಕ್ರಾಸ್ತಾ ರವರು ವಿದ್ಯಾರ್ಥಿಗಳು ಫಾದರ್ ಮುಲ್ಲರ್ ಸಂಸ್ಥೆಯನ್ನು ಆಯ್ಕೆ ಮಾಡಿದಕ್ಕಾಗಿ ಅಬಿನಂದಿಸಿ ರೋಗಿಗಳ ಆರೈಕೆಯನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸುವಂತೆ ಉತ್ತೇಜಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಂಸ್ಥೆಯ ಮೂಲಭೂತ ಧ್ಯೇಯ ಮತ್ತು ನಡುವಳಿಕೆಯನ್ನು ಅಳವಡಿಸುತ್ತಾ ತಮ್ಮ ಸಾಧನೆಯಲ್ಲಿ ಮುಂದುವರಿಯುವಂತೆ ಹುರಿದುಂಬಿಸಿದರು. ಶೈಕ್ಷಣಿಕ ಉಸ್ತುವಾರಿ ಡಾ. ಜ್ಯೋಶ್ನಾ ಶಿವಪ್ರಸಾದ್ ರವರು ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಹೊಸದಾಗಿ ಸೇರಿದ ವಿದ್ಯಾರ್ಥಿಗಳು ತಮ್ಮ ಸ್ವಯಂ ಪರಿಚಯವನ್ನು ಮಾಡಿದರು. ಡಾ. ಶಿವಾನಿ ಸಿಂಗ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.










