

ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ತಳಿರು-ತೋರಣ,ಬಲೂನು ಕಟ್ಟಿ ಬ್ಯಾಂಡ್ ಸದ್ದಿನೊಂದಿಗೆ ಭವ್ಯ ಮೆರವಣೆಯ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.