

ಕುಂದಾಪುರ: 4ಸೆಪ್ಟೆಂಬರ್02024ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಏನ್ ವಿಶ್ವನಾಥ ಕರಬ, ಪ್ರಾಂಶುಪಾಲರು, ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ್ಯೋದ್ದೇಶಗಳು, ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಪ್ರೊ ಸತ್ಯನಾರಾಯಣ ಹತ್ವಾರ್ ಇವರು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ಅಗತ್ಯತೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅರುಣ್ ಏ ಎಸ್, ರಾಮಚಂದ್ರ ಆಚಾರ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಸ್ವಯಂಸೇವಕರಾದ ಕುಮಾರಿ ಸಮೀಕ್ಷಾ ಶೆಟ್ಟಿ ಸ್ವಾಗತಿಸಿದರು, ಕುಮಾರಿ ದೀಕ್ಷಾ ಅತಿಥಿಗಳನ್ನು ಪರಿಚಯಿಸಿದರು,ಅಮಿತ್ ರಾಜ್ ವಂದಿಸಿದರು ಹಾಗೂ ವಿಗ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
