ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಜೂನಿಯರ್ ರೆಡ್ಕ್ರಾಸ್ ಸಂಘದ ಉದ್ಘಾಟನೆಯು ಸಂತ ಮೇರಿ ಹಾಗೂ ಹೋಲಿ ರೋಜರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಡಿಸೋಜಾರವರು ವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅತಿಥಿಗಳನ್ನು ಸ್ವಾಗತಿಸಿದರು.
ಕುಂದಾಪುರ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ರೆಡ್ಕ್ರಾಸ್ ಸಂಸ್ಥೆಯ ಧ್ಯೇಯೊದ್ದೇಶಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ರೆಡ್ಕ್ರಾಸ್ ಸಂಸ್ಥೆಯ ಖಜಾಂಜಿ ಶ್ರೀ ಶಿವರಾಮ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ನ ಪ್ರತಿಜ್ಞಾ ವಿಧಿ ಭೋಧಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ರೆಡ್ಕ್ರಾಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಡಾ. ಸೋನಿ ಡಿ’ಕೋಸ್ಟಾ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶುಚಿತ್ವದ ಕುರಿತಾದ ಮಾಹಿತಿಯನ್ನು ನೀಡಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರೂ ಆದ ಸೋನಿ ಡಿ’ಕೋಸ್ಟಾರವರ ಸಮಾಜ ಸೇವೆಗಾಗಿ ್ಲ ಶಾಲಾವತಿಯಿಂದ ಅವರನ್ನು ಸನ್ಮಾನಿಸಲಾಯಿತು. ರೆಡ್ಕ್ರಾಸ್ ಸಂಸ್ಥೆಯ ಸದಸ್ಯರಾದ ಶ್ರೀ ಗಣೇಶ್ ಆಚಾರ್ರವರು ಉಪಸ್ಥಿತರಿದ್ದರು. ಜೂನಿಯರ್ ರೆಡ್ಕ್ರಾಸ್ನ ಅಧ್ಯಕ್ಷೆ ಕುಮಾರಿ ಧನ್ಯಶ್ರೀಯವರಿಗೆ ರೆಡ್ಕ್ರಾಸ್ನ ಬ್ಯಾಡ್ಜ್ ನೀಡಲಾಯಿತು.
ಶಿಕ್ಷಕಿ ಕುಮಾರಿ ರಂಜಿತಾರವರು ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಹಾಗೂ ಜೂನಿಯರ್ ರೆಡ್ಕ್ರಾಸ್ನ ಸಂಯೋಜಕಿ ಶ್ರೀಮತಿ ನಿಖಿತಾ ಶೆಟ್ಟಿಯವರು ವಂದನಾರ್ಪಣೆಗೈದರು. ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಮಮತಾರವರು ನಿರೂಪಿಸಿದರು.