

ನಗರದ ಸೈoಟ್ ಮೇರಿಸ್ ಪದವಿಪೂರ್ವ ಕಾಲೇಜಿನಲ್ಲಿ ಜುಲೈ ತಿಂಗಳ 10ನೇ ತಾರೀಖಿನಂದು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ದೀಪ ಬೆಳಗುವುದರೊಂದಿಗೆ ಜೂನಿಯರ್ ರೆಡ್ ಕ್ರಾಸ್ ಸಾಂಕೇತಿಕ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು.
ಸಮಾರಂಭದಲ್ಲಿ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿಯವರಾದ ರೆ. ಫಾ. ಪಾವ್ಲ್ ರೇಗೊರವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಗಳನ್ನು ಶ್ಲಾಘಿಸಿ, ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಹದಗೆಡಿಸುವ ಆಹಾರದಿಂದ ದೂರವಿರಬೇಕು ಎನ್ನುತ್ತಾ ಎಲ್ಲರಿಗೂ ಭಗವಂತನು ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರದಲ್ಲಿ ಮುಖ್ಯ ಅತಿಯಾಗಿ ಭಾಗವಹಿಸಿದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀ ಜಯಕರ ಶೆಟ್ಟಿ ಯವರು ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಬಗೆ, ಉದ್ದೇಶ ಹಾಗೂ ಅದರ ಕಾರ್ಯ ಕಲಾಪಗಳ ವಿವರ ತಿಳಿಸಿ ತಾರತಮ್ಯವಿಲ್ಲದೆ ಒಗ್ಗಟ್ಟು, ಮಾನವೀಯ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ರೆಡ್ ಕ್ರಾಸ್ ಸಂಸ್ಥೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಕುಂದಾಪುರದ ವೈದ್ಯರು ಡಾ. ಸೋನಿ ಡಿಕೋಸ್ತಾರವರು ಪ್ರಥಮ ಚಿಕಿತ್ಸೆಯ ಕುರಿತು ಉತ್ತಮ ಮಾಹಿತಿ ನೀಡಿದರು. ರೆಡ್ ಕ್ರಾಸ್ ನ ಖಜಾಂಚಿ ಯಾಗಿರುವ ಶ್ರೀ ಶಿವರಾಮ ಶೆಟ್ಟಿ ಯವರು ಉಪಸ್ಥಿತರಿದ್ದು ರೆಡ್ ಕ್ರಾಸ್ ನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೆರ್ನಾಂಡಿಸ್ ರವರು ಶುಭ ಹಾರೈಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ಉಪನ್ಯಾಸಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ದ್ವಿತೀಯ ಪಿ ಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಿಯಾ ಡಿಸೋಜ ಕಾರ್ಯಕ್ರಮ ನಿರೂಪಿಸಿ, ಪ್ರಥಮ ಪಿ ಯು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪೃಥ್ವಿರಾಜ ವಂದಿಸಿದರು.













hw-remosaic: false;






