ಕುಂದಾಪುರ: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾತ್ಮಕ ದೃಷ್ಟಿಯಲ್ಲಿ ಭಾಗವಹಿಸುವುದು ಮುಖ್ಯ. ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿನಡೆಗೆ ಸಾಗುವಲ್ಲಿ ಸದಾ ಪ್ರಯತ್ನಶೀಲರಾಗಿರಬೇಕು ಎಂದು ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಂಚಾಲಕ ಅತೀ.ವಂ.ಫಾ. ಸ್ಟ್ಯಾನಿ ತಾವ್ರೋ ಹೇಳಿದರು.
ಅವರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆ-2022 ಹಾಗೂ ವ್ಯಸನ ಮುಕ್ತ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಂದ್ಯಾಟವನ್ನು ಕುಂದಾಪುರ ಪುರಸಭೆಯ ಸದಸ್ಯ ಪ್ರಭಾಕರ ವಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ, ಉಡುಪಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ಕಿರಣ್ ಕುಂದಾಪುರ, ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್‍ಚಂದ್ರ ಶೆಟ್ಟಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಿಆರ್‍ಪಿ ಶಂಕರ್ ಶೆಟ್ಟಿ,ಉಡುಪಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಕಾರ್ಯದರ್ಶಿ ಲೋಹಿತಾಶ್ವ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡೋರಾತಿ ಸುವಾರಿಸ್, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡಿಸ್, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಸಾಶಾಂತಿ, ಹೋಲಿ ರೋಸರಿ ಪ್ಲೇ ಸ್ಕೂಲ್‍ನ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪಂದ್ಯಾಟದ ಪ್ರಾಯೋಜಿಕತ್ವ ವಹಿಸಿಕೊಂಡ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.
ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತ ಲೋಬೋ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ಹಮ್ಮು ನಾಯಕ್ ಪ್ರಾಸ್ತಾವನೆಗೈದರು. ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.