ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರಸ್ತುತ ವರ್ಷದ ಸಾಂಸ್ಕೃತಿಕ ತಂಡಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಪ್ರತಿವರ್ಷವೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶವನ್ನು ಒದಗಿಸಲಾಗುತ್ತಿದ್ದು ಈ ವರ್ಷ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಎಲ್ಲ ವಿಧ್ಯಾರ್ಥಿಗಳನ್ನು ಹತ್ತು ತಂಡಗಳಾಗಿ ವಿಂಗಡಿಸಿ ಮುಂದಿನ ಎಲ್ಲ ಸ್ಪರ್ದೆಗಳನ್ನು ತಂಡದ ಮಧ್ಯೆ ನಡೆಸಲಾಗುತ್ತದೆ.
ಈ ಮೂಲಕ ವಿಧ್ಯಾರ್ಥಿಗಳ ಕ್ರಿಯಾಶೀಲತೆ ಹಾಗೂ ಪ್ರತಿಭೆ ಹೊರಹಾಕಲು ಉತ್ತಮ ವೇದಿಕೆ ಸಿಕ್ಕಂತಾಗುತ್ತದೆ. ಮೊದಲ ಸ್ಪರ್ದೆಯಾಗಿ ಫ಼್ಯಾಶನ್ ಶೋ ನಡೆಸಿದ್ದು ವಿಧ್ಯಾರ್ಥಿಗಳು ಅತ್ಯಂತ ಕ್ರಿಯಾಶೀಲರಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ ಸಾಂಸ್ಕೃತಿಕ ಸಂಯೋಜಕಿ ಪ್ರೊ.ಸೂಕ್ಷ್ಮ ಅಡಿಗ, ವಿವಿಧ ತಂಡಗಳ ವಿದ್ಯಾರ್ಥಿ ಮುಖಂಡರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.