ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಕೋಲಾರ : ಇಂದು ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್‌ನ್ನು ಉದ್ಘಾಟನೆಯನ್ನು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ನೆರವೇರಿಸಿದರು .
ಈ ಸಂದರ್ಭದಲ್ಲಿ ಲೋಕಸಭಾ ಸಂಸದರಾದ ಎಸ್. ಮುನಿಸ್ವಾಮಿ , ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ಎನ್.ಎಂ. ನಾಗರಾಜ್ , ಕುಡಾ ಅಧ್ಯಕ್ಷರಾದ ಚಲಪತಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಂ.ಜಿ. ಪಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .