ಐ ಎಂ ಜೆ ಐ ಎಸ್ ಸಿ ಮೂಡ್ಲಕಟ್ಟೆ ಕುಂದಾಪುರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ  ಮಹಿಳೆಯರ ಥ್ರೋ ಬಾಲ್ ಪಂದ್ಯಾಕೂಟದ ಉದ್ಘಾಟನೆ 2022 – 23

ಕುಂದಾಪುರ: ಮೇ:17 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಕೂಟದ ಉದ್ಘಾಟನೆಯನ್ನು ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ| ಕಿಶೋರ್ ಕುಮಾರ್ ಸಿ ಕೆ. ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾ ಸಂಸ್ಥೆಯ ಬೆಳವಣಿಗೆಯಲ್ಲಿ ಕ್ರೀಡಾ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಲ್ಲಿ ಅಂತರ್ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾಕೂಟವನ್ನು  ನಡೆಸಬಹುದೆಂಬ ಆಶಯವನ್ನು ವ್ಯಕ್ತಪಡಿಸಿ, ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಯವರಾಗಿ ಆಗಮಿಸಿದ ಶ್ರೀಯುತ ಜಯಕರ್ ಶೆಟ್ಟಿ, ಅಧ್ಯಕ್ಷರು, ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ, ಇವರು ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡಬೇಕೆಂದು ತಿಳಿಸುತ್ತಾ, ಸೋಲು ಗೆಲುವು ನಮ್ಮ ಬದುಕಿನ ಭಾಗ. ಸೋಲು ನಮ್ಮ ಕೊನೆಯಲ್ಲ, ಅದು ಮುಂದಿನ ಯಶಸ್ಸಿಗೆ ಸೋಪಾನ ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಐ ಎಂ ಜೆ ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊ| ದೋಮ ಚಂದ್ರಶೇಖರ್ ರವರು ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಮುಂದುವರಿಕೆ ಎನ್ನುವುದು ಕ್ರೀಡೆಯ ಮನೋಭಾವವನ್ನು ತಿಳಿಸುತ್ತದೆ ಎಂದರು.

 ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಖಾರ್ವಿ, ವಿವಿಧ ವಿದ್ಯಾ ಸಂಸ್ಥೆಗಳ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಕರು, ಕಾಲೇಜಿನ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್,  ರವರು ಪ್ರಾಸ್ತಾವಿಕ ಭಾಷಣ ನೀಡಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರೊ| ಸುಮನರವರು ನಿರೂಪಿಸಿದರು.  ಆಂಗ್ಲ ವಿಭಾಗದ ಪ್ರೊ| ಪಾವನ ರವರು ಸ್ವಾಗತಿಸಿದರು ಹಾಗೂ ವಾಣಿಜ್ಯ ವಿಭಾಗದ ಪ್ರೊ|ಶಬೀನಾ ಹೆಚ್ ವಂದಿಸಿದರು.