ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಉದ್ಘಾಟನೆ ಯನ್ನು ರೆಡ್ ಕ್ರಾಸ್ ಸಭಾಪತಿ ಎಸ್.ಜಯಕರ ಶೆಟ್ಟಿ ಯವರು ನಡೆಸಿ ಕೊಟ್ಟರು. ಮತ್ತು ರೆಡ್ ಕ್ರಾಸ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಯವರು ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಸಂಯೋಜಕರಾದ ಯೋಗೀಶ್ ಅತಿಥಿ ಗಳನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ ಕ್ರಾಸ್ ಸಂಯೋಜಕ ರಾದ ಸತ್ಯನಾರಾಯಣ ಪುರಾಣಿಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ದರು. ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಮತ್ತು ಸದಸ್ಯರಾದ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಇನ್ನೋರ್ವ ಸಂಯೋಜಕರಾದ ಮಾಲತಿ ವಾದಿಸಿದರು ಹಾಗೂ ವಿದ್ಯಾರ್ಥಿನಿ ಶಿಲ್ಪಾ ನಿರೂಪಿಸಿದರು.
ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ( USA) ಕೊಡ ಮಾಡಿದ ರೂಪಾಯಿ ಒಂದು ಲಕ್ಷ ವಿದ್ಯಾರ್ಥಿ ವೇತನ ಹದಿನೇಳು ಬಡ ವಿದ್ಯಾರ್ಥಿಗಳಿಗೆ ನೀಡಲಾಯಿತು.