
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರಿಂದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಯೂತ್ ರೆಡ್ ಕ್ರಾಸ್ ಘಟಕವನ್ನು ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಬರಾದ ಶ್ರೀ ಜಯಕರ ಶೆಟ್ಟಿ ಉದ್ಭಾ, ಟಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರಿ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶ್ರೀ ಶಿವರಾಮ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಶ್ರೀ “ಮುತ್ತಯ್ಯ ಶೆಟ್ಟಿ, ಶ್ರೀ ಗಣೇಶ ಆಚಾರ್ಯ, ಡಾ.ಸೋನಿ, ಶ್ರೀ ನಾರಾಯಣ ಮುಂತಾದವರು ಉಪಸ್ಥಿತರಿದ್ದರು. ಯೂತ್ ರೆಡ್ ಕ್ರಾಸ್ನ ಅಧ್ಯಕ್ಷ ಶ್ರೀ ಕಾರ್ತಿಕ್, ಕಾರ್ಯದರ್ಶಿ ಶ್ರೀ ಪವನ್ ಅಧಿಕಾರವನ್ನು ಸ್ವೀಕರಿಸಿದರು. ಯೂತ್ ರೆಡ್ ಕ್ರಾಸ್ನ ಎಲ್ಲಾ ಸದಸ್ಯರಿಗೆ, ಕಾರ್ಯಕಾರಿಣಿ ಸದಸ್ಯರಾದ ಶ್ರೀ ದಿನಕರ ಆರ್.ಶೆಟ್ಟಿ ಪ್ರತಿಜ್ಞಾ ವಿಧಿ ಬೋದಿಸಿದರು. ಯೂತ್ ರೆಡ್ ಕ್ರಾಸ್ ಸಂಚಾಲಕ ಉಪನ್ಯಾಸಕರಾದ ಶ್ರೀ ಶಂಕರ ನಾಯ್ಕ್ ಸ್ವಾಗತಿಸಿದರೆ ಸಹಸಂಚಾಲಕ ಉಪನ್ಯಾಸಕರಾದ ಶ್ರೀ ಕಿರಣಕುಮಾರ್ ವಂದಿಸಿದರು. ಉಪನ್ಯಾಸಕರಾದ ಕಾಳಾವರ ಶ್ರೀ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


