

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ದಿಂದ ಮೂಡ್ಲಕಟ್ಟೆ ತಾಂತ್ರಕ ವಿದ್ಯಾಲಯದಲ್ಲಿ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸಾ ಶಿಭಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು IMJISC ಪ್ರಾಂಶುಪಾಲರಾದ ಪ್ರತಿಭಾ ಪಾಟಿಲ್ ಎಮ್ ಇವರು ವಹಿಸಿದ್ದರು. ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು ಮತ್ತು ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ ಕ್ರಾಸ್ ಸಂಯೋಜಕ ಶ್ರೀ ಸತ್ಯನಾರಾಯಣ ಪುರಾಣಿಕ ವಿದ್ಯಾರ್ಥಿ ಗಳಿಗೆ ಪ್ರತಿಜ್ನಾ ವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕೊಸ್ಟಾ ಪ್ರಥಮ ಚಿಕಿತ್ಸಾ ತರಬೇತಿ ನೀಡಿದರು. ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಖಜಾಂಚಿ ಶಿವರಾಮ ಶೆಟ್ಟಿ, ಮತ್ತು IMJISC ಪ್ರೊಫೆಸರ್ ಶಬೀನಾ ಎಚ್. ಉಪಸ್ಥಿತರಿದ್ದರು.




