

ಬೀಜಾಡಿ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ವಕೀಲ ಹಂದಕುಂದ ಅಶೋಕ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ ಸಂದೇಶ ನೀಡಿದರು.ಸಮಾರಂಭಸ ಅಧ್ಯಕ್ಷತೆಯನ್ನು ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ ವಹಿಸಿದ್ದರು.ಬೀಜಾಡಿ ಗೋಪಾಡಿ ರೋಟರಿ ಸಮುದಾಯ ದಳದ ಅಧ್ಯಕ್ಷ ರಾಜೇಶ್ ಆಚಾರ್ಯ, ಬೀಜಾಡಿಯ ಎಂ.ಕೃಷ್ಣಪ್ಪದ ಮಾಲಿಕ ದೇವರಾಜ್,ಬೀಜಾಡಿ ಮೂಡು ಸರಕಾರಿ ಹಿ.ಪ್ರಾ.ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ಅಮೀನ್, ಮುಖ್ಯ ಶಿಕ್ಷಕ ಗಣೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು. ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಬೀಜಾಡಿ ಮೂಡು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ ಕುಮಾರ್ ಬಿ.ಆರ್ ವಂದಿಸಿದರು.

