

ಬಸ್ರೂರು ; ಸ್ಥಳೀಯ ಸೈಂಟ್ ಫಿಲಿಪ್ ನೇರಿ ಚರ್ಚಿನಲ್ಲಿ ಚರ್ಚಿನ ಧರ್ಮ ಗುರುಗಳಾದ ಫಾದರ್ ರೋಯ್ ಲೋಬೊ ಇವರ ಅಧ್ಯಕ್ಷತೆಯಲ್ಲಿ, “ವಿಶೇಷ ಸಮಗ್ರ ಪರಿಷ್ಕರಣೆ ” ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಲ್ಡ್ರಿನ್ ಡಿಸೋಜಾ ಆಗಮಿಸಿ ವಿಶೇಷ ಸಮಗ್ರ ಪರಿಷ್ಕರಣೆ ( SIR ) ಯ ಉದ್ದೇಶವೂ ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಹಾಗೂ ಖಚಿತಪಡಿಸಿಕೊಳ್ಳಿ ಪ್ರಜಾಪ್ರಭುತ್ವದ ಭದ್ರ ಅಡಿಪಾಯದ ಎಸ್ಐಆರ್ ನ ಭಾಗವಾಗಿರಿ’ ಎಂದು ನುಡಿದರು . ನಾಗರಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು

