ಪುರಸಭೆ ಆಯವ್ಯಯದಲ್ಲಿ ಪಟ್ಟಣಕ್ಕೆ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕಾದ ಅಗತ್ಯವಿದೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪುರಸಭೆ ಆಯವ್ಯಯದಲ್ಲಿ ಪಟ್ಟಣಕ್ಕೆ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕಾದ ಅಗತ್ಯವಿದೆ. ಅದಕ್ಕೆ ಪೂರಕವಾಗಿ ಆಯ ವ್ಯಯವನ್ನು ಸಿದ್ಧಪಡಿಸಬೇಕು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ 2021 – 22ನೇ ಸಾಲಿನ ಆಯವ್ಯಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ಎಲ್ಲ ವಾರ್ಡ್‍ಗಳಿಗೆ ಕುಡಿಯುವ ನೀರು ಸೌಲಭ್ಯ ಕಲ್ಪಿಸಬೇಕು. ಅಗತ್ಯ ಇರುವಲ್ಲಿ ರಸ್ತೆ, ಚರಂಡಿ ನಿರ್ಮಿಸಬೇಕು. ಬೀದಿ ದೀಪದ ವ್ಯವಸ್ಥೆ ಸರಿಪಡಿಸಬೇಕು. ಸ್ವಚ್ಛತೆ ಪಾಲನೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.
ಪುರಸಭೆಯ ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಸದಸ್ಯರಾದ ಬಿ.ವೆಂಕಟರೆಡ್ಡಿ, ರಾಜು, ರಂಗಪ್ಪ, ಸಿಇಒ ರಾಜೇಶ್ವರಿ, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಕಂದಾಯ ಅಧಿಕಾರಿ ಶಂಕರ್, ನಾಗೇಶ್. ಟಿ.ಪಿ.ಸರ್ವೇಶ್ ಇದ್ದರು.