JANANUDI.COM NETWORK

ರಾಜ್ಯದಲ್ಲಿ ಅಮಾನವೀಯ ಘಟನೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ಗರ್ಭಿಣಿಯಾದ ಮೇಲೆ ನೇಣು ಬಿಗಿದು ಕೊಲೆ.
ಕೆ.ಆರ್.ಪೇಟೆ, ಡಿ.18 ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ನಡೆಸಿರುವ ಆತಂಕಕಾರಿ ಘಟನೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.
ಬಾಲಕಿಯ ನರೆ ಮನೆಯ ಪರಮೇಶ್(46) ಎಂಬಾತ ಇಂತಹ ಅಮಾನವೀಯ ಕ್ರತ್ಯ ಎಸಗಿದ್ದಾನೆ. ಕಳೆದ ಐದಾರು ತಿಂಗಳಿನಿಂದ ನಿರಂತರವಾಗು ಬಾಲಕಿಯನ್ನು ಅತ್ಯಾಚಾರ ಮಾಡಿ, ಆಕೆ ಗರ್ಭಿಣಿ ಎಂದು ತಿಳಿದ ಮೇಲೆ ಆಕೆಗೆ ನೇಣು ಹಾಕಿ ಕೊಲೆ ಮಾಡಿದ್ದಾನೆ.
ಈ ಕುರಿತು ಬಾಲಕಿಯ ಪೋಷಕರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಮೇಶ್ ಬಾಲಕಿಯ ಪೋಷಕರು ಕೆಲಸಕ್ಕೆ ಹೋದ ಸಮಯವನ್ನು ನೋಡಿಕೊಂಡು ಮನೆಗೆ ಬಂದು ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣ ಆಕೆಗೆ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಪರಮೇಶನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ತಿಳಿದು ಬಂದಿದೆ.