ಶ್ರೀನಿವಾಸಪುರ 1 : ಮಕ್ಕಳಿಗೆ ಮೂರು ದಿನ ನೀಡುವ ಬದಲು ಎಲ್ಲಾ ವಾರದ 6 ದಿನಗಳು ನೀಡಿದರೆ ಒಳ್ಳೆಯದೆಂದು ಸಲಹೆ ನೀಡಿ ಸರ್ಕಾರಿ ಶಾಲೆ ಮಕ್ಕಳಿಗೆ ಯಾವುದೇ ರೀತಿಯ ಪೌಷ್ಠಿಕಾಂಶಗಳಿಂದ ವಂಚಿತರಾಗಬಾರದೆಂದು ಕಾರ್ಯಕ್ರಮ ರೂಪಿಸಿರುವ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಸಮಸ್ಥೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಧನ್ಯವಾದಗಳು ತಿಳಿಸಿದರು
ಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ, ಪ್ರದಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಿಂದ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಇವರ ಸಹಯೋಗದಲ್ಲಿ ಮದ್ಯಾಹ್ನ ಉಪಹಾರ ಯೋಜನೆಯಡಿ ರಾಗಿಮಾಲ್ಟ್ ಹಾಲಿನ ಮಿಶ್ರಣವನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ತಿನ್ನುವ ಆಹಾರದಲ್ಲಿ ಪೌಷ್ಟಿಕ ಆಹಾರವು ಕಡಿಮೆ ಯಾಗಿರುವದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಅಪೌಷ್ಟಿಕತೆ ಕಾಣಿಸುತ್ತಿರಿವುದರಿಂದ ವಿದ್ಯಾರ್ಥಿಗಳು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎನ್ನುತ್ತಾ ವಿದ್ಯಾರ್ಥಿಗಳು ಹೆಚ್ಚು ಕುರುಕು ತಿಂಡಿಗಳನ್ನು ತಿನ್ನದೇ ಪೌಷ್ಟಿಕ ಆಹಾರಗಳನ್ನು ತಿನ್ನುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಬಿಸಿ ಹಾಲಿನೊಂದಿಗೆ ಮಿಶ್ರಣಗೊಳಿಸಿ ಶಾಲಾ ಮಕ್ಕಳಿಗೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಂತರ ಶಾಲೆಯ ಅಂದಾಜು 4 ಲಕ್ಷ ವೆಚ್ಚದಲ್ಲಿ ಮಂಜೂರಾತಿಯಾಗಿರುವ ಕಾಂಪೌಂಡ್ ನಿರ್ಮಾಣಕ್ಕೂ ಸಹ ಶಾಸಕರು ಭೂಮಿ ಪೂಜೆಯನ್ನು ನೆರವೇರಿಸಿದರು.
ಇಒ ಎಸ್.ಶಿವಕುಮಾರಿ, ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ, ಅಕ್ಷರದಾಸೋಹ ಸಹಾಯಕಿ ಸುಲೋಚನ, ಎಸ್ಡಿಎಂಸಿ ಅಧ್ಯಕ್ಷ ಆನಂದರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಎಸ್.ಶ್ರೀನಿವಾಸಪ್ಪ, ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಸುಬ್ರಮಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಯ್ಯಾರೆಡ್ಡಿ, ಗುತ್ತಿಗೆದಾರ ಶ್ರೀನಿವಾಸರೆಡ್ಡಿ, ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಶಿಕ್ಷಕರಾದ ಗೌರಮ್ಮ, ರೆಡ್ಡೆಮ್ಮ, ಶ್ರೀದೇವಿ, ಗೀಂತಾಂಜಲಿ, ಲೀಲಾವತಿ, ಗೀತಶ್ರೀ, ಫರ್ವೀನ್, ರಾಮಚಂದ್ರಪ್ಪ, ನಾಗರಾಜ್, ನಾರಾಯಣಸ್ವಾಮಿ ಇದ್ದರು.