

ಶ್ರೀನಿವಾಸಪುರ: ಪಟ್ಟಣದಲ್ಲಿ ಸೋಮವಾರ, ಈಚೆಗೆ ನಿಧನರಾದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅವರ ಗೌರವಾರ್ಥ ಏರ್ಪಡಿಸಿದ್ದ ಪುಷ್ಪಾಂಜಲಿ ಕಾರ್ಯಕ್ರಮದದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಹಾಗೂ ಅನ್ನಸಂತರ್ಪಣೆ ಮಾಡಲಾಯಿತು.
ಪುರಸಭೆ ಕಚೇರಿ ಸಮೀಪ ಎಂಜಿ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಮೇಲೆ ಇಡಲಾಗಿದ್ದ ದಿವಂಗತ ವಿಜಯಮ್ಮ ಅವರ ಭಾವಚಿತ್ರಕ್ಕೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಪುಷ್ಪಾಂಜಲಿ ಅರ್ಪಿಸಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಇಂದ್ರಾಭವನ್ ವೃತ್ತ, ಸರ್ಕಾರಿ ಬಸ್ ನಿಲ್ದಾಣ ಹಾಗೂ ತಾಲ್ಲೂಕು ಕಚೇರಿ ಸಮೀಪ ಅನ್ನದಾನ ಮಾಡಲಾಯಿತು.
ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಪುರಸಭಾಧ್ಯಕ್ಷೆ ಎನ್.ಎಂ.ಲಲಿತಾ ಶ್ರೀನಿವಾಸ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥರೆಡ್ಡಿ, ಕೃಷ್ಣಾರೆಡ್ಡಿ, ಹರೀಶ್ ಯಾದವ್, ವೇಣು, ಹೇಮಂತ್, ನರಸಿಂಹ ಇದ್ದರು.