ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮಿನೆಜೆಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಧ್ಯಾಹ್ನ ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.
ಎರಡನೇ ದಿನದಂದು ಶ್ರೀಮತಿ ಜುಡಿತ್ ಮೆಂಡೋನ್ಸಾ ಲಿಂಗ ಸಮಾನತೆಯ ಕುರಿತು ಮಾತನಾಡಿ “ಎಲ್ಲಾ ಕೆಲಸಗಳನ್ನು ಪುರುಷರು ಮತ್ತು ಮಹಿಳೆಯರು ಇಬ್ಬರೂ ಸಮಾನವಾಗಿ ಮಾಡಬಹುದು’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ, ಜೇಸಿಐ ಕುಂದಾಪುರದ ಸಂಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಜೆಸಿಐ ಕುಂದಾಪುರ ಸಿಟಿ ಮಹಿಳಾ ವಿಭಾಗದ ಅಧ್ಯಕ್ಷೆ ಎಂ.ಎಸ್.ಪ್ರೇಮಾ, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷೆ ಡಾ.ಸೋನಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರೊ.ಅಕ್ಷತಾ ನಾಯಕ್ ಸಂಯೋಜಿಸಿದರು ಮತ್ತು ಮೇಬಲ್, ಪ್ರೊ.ಜಗದೀಶ್ ಮತ್ತು ಪ್ರೊ.ಪಾವನ ಕಾರ್ಯಕ್ರಮಗಳನ್ನು ನಿರೂಪಿಸಿದರು.