ಸಂತ ಲಾರೆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

JANANUDI.COM NETWORK

ಶಿರ್ವಾ: “ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡನ್ನು ಕೂಡ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ವಿದ್ಯಾರ್ಥಿಗಳು ಪ್ರತಿ ದಿವಸ ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯದೊಂದಿಗೆ ಏಕಾಗ್ರತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ .ಆದ್ದರಿಂದ ನಾವೆಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡೋಣ ಮತ್ತು ಆರೋಗ್ಯವಂತರಾಗಿ ಬಾಳೋಣ”ಎಂದು ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರು ಮತ್ತು ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಶ್ರೀ ದೇವದಾಸ ಹೆಬ್ಬಾರ್ ರವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ವಂದಿಸಿ ಶಿಕ್ಷಕ ಸ್ಟ್ಯಾನಿ ಮಿನೇಜಸ್ ನಿರೂಪಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ವಲೇರಿಯನ್ ನೊರೊನಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಜೆಸಿಂತಾ ನತಾಲಿಯಾ ಲೋಬೊ, ನಿವ್ರತ್ತ ಶಿಕ್ಶಿಕಿ ಶ್ರೀಮತಿ ಸರೋಜಿನಿ ಕಾಮತ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಲಯನ್ಸ್ ಮತ್ತು ಲಿಯೋ ಕ್ಲಬ್ ಮೂಡುಬೆಳ್ಳೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು . ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಮಾಡಿದರು .ಯೋಗ ತರಬೇತಿಯನ್ನು ಸಂಸ್ಥೆಯ ನಿವೃತ್ತ ಶಿಕ್ಷಕಿ ಸರೋಜಿನಿ ಕಾಮತ್ ರವರು ನಡೆಸಿಕೊಟ್ಟರು.