

ಶಿರೂರು : ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ಡಾI ರವಿದಾಸ್ ಶೆಟ್ಟಿ
ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಗಳಲ್ಲಿ ಒಂದು. ಇದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಪ್ರಾಚೀನ ಶಿಸ್ತಾಗಿದ್ದು, ವಿಶ್ವದಾದ್ಯಂತ ಅದರ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಅರಿಯತೊಡಗಿದ್ದಾರೆ.
ಈ ವರ್ಷದ ಮುಖ್ಯ ಕಾರ್ಯಕ್ರಮವು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜರುಗಲಿದೆ. ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನವನ್ನು “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” (Yoga for Healthy Ageing) ಎಂಬ ವಿಷಯದಡಿ ಆಚರಿಸಲಾಗುತ್ತಿದೆ. ಇದು ವಯಸ್ಸಾದಂತೆ ದೈಹಿಕ ಕ್ಷಮತೆ, ಸ್ವಾತಂತ್ರ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಯೋಗದ ಮಹತ್ವವನ್ನು ಒತ್ತಿಹೇಳುತ್ತದೆ.
ಭಾರತದಾದ್ಯಂತ ಸುಮಾರು 2,500ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದ್ದು, ಕರ್ನಾಟಕದ ಐತಿಹಾಸಿಕ ತಾಣವಾದ ಹಂಪಿಯ ಆವರಣದಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೈಹಿಕ ಸದೃಢತೆ, ಮಾನಸಿಕ ನೆಮ್ಮದಿ ಮತ್ತು ಸಮಗ್ರ ಆರೋಗ್ಯವನ್ನು ಉತ್ತೇಜಿಸುವುದು ಈ ಜಾಗತಿಕ ಆಚರಣೆಯ ಮುಖ್ಯ ಉದ್ದೇಶವಾಗಿದೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರತಿ ವರ್ಷ ಜೂನ್ 21ರಂದು ಆಚರಿಸಲಾಗುತ್ತದೆ. 2014ರಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭಾರತ ಸಂಘಟಿತ ರಾಷ್ಟ್ರಗಳ ಸಂಘದಲ್ಲಿ ಯೋಗದ ಮಹತ್ವವನ್ನು ವಿಶ್ವ ಸಮುದಾಯಕ್ಕೆ ಪರಿಚಯಿಸಿ, ಯೋಗ ದಿನಾಚರಣೆಗೆ ಪ್ರಸ್ತಾವನೆ ನೀಡಿದರು. ಈ ಪ್ರಸ್ತಾವನೆಯನ್ನು ವಿಶ್ವದ ಅನೇಕ ರಾಷ್ಟ್ರಗಳು ಬೆಂಬಲಿಸಿ, 2015ರಿಂದ ಪ್ರತಿ ವರ್ಷ ಜೂನ್ 21ರಂದು ‘ಅಂತರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲು ನಿರ್ಧರಿಸಲಾಯಿತು.
ಯೋಗದ ಉಪಯೋಗಗಳು ಅಪಾರ. ಇದು ಶ್ವಾಸ ನಿಯಂತ್ರಣ, ಧ್ಯಾನ, ಆಸನಗಳ ಮೂಲಕ ದೇಹದ ಸ್ಥಿರತೆ, ಮನಸ್ಸಿನ ಶಾಂತಿ ಮತ್ತು ಆರೋಗ್ಯವನ್ನು ಒದಗಿಸುತ್ತದೆ. ಮನುಷ್ಯನ ದೈನಂದಿನ ಜೀವನದಲ್ಲಿ ಯೋಗದ ಅಭ್ಯಾಸವು ಒತ್ತಡ ನಿವಾರಣೆ, ರೋಗ ನಿರೋಧಕ ಶಕ್ತಿಯ ಹೆಚ್ಚಳ ಮತ್ತು ಮನೋಬಲದ ವೃದ್ಧಿಗೆ ಕಾರಣವಾಗುತ್ತದೆ.
ಯೋಗ ದಿನಾಚರಣೆಯಂದು ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆಯುತ್ತವೆ. ಜನರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಉಪನ್ಯಾಸಗಳು, ಕಾರ್ಯಾಗಾರಗಳು ಮತ್ತು ಮಾಧ್ಯಮಗಳ ಮೂಲಕ ಜಾಗೃತಿ ಕಾರ್ಯಗಳು ನಡೆಸಲಾಗುತ್ತವೆ.
ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಅಂತರಾಷ್ಟೀಯ ಮಟ್ಟದಲ್ಲಿ ಮಾನಸಿಕ ಹಾಗೂ ಶಾರಿರಿಕ ಆರೋಗ್ಯಕ್ಕಾಗಿ ಆಯುಷ್ ಮಂತ್ರಾಲಯದ ಜೋತೆಗೆ, ಯೋಗಾಸನ ಹಾಗೂ ರಾಜಯೋಗ ಶಿಬಿರಗಳನ್ನು ಏರ್ಪಡಿಸಿದೆ.
ಯೋಗವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಕೇವಲ ಒಂದು ದಿನ ಮಾತ್ರವಲ್ಲ, ಪ್ರತಿದಿನವೂ ಕೆಲ ನಿಮಿಷಗಳನ್ನು ಯೋಗಕ್ಕೆ ಮೀಸಲಿಡುವುದರಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಮಹತ್ತರವಾದ ಬದಲಾವಣೆಗಳನ್ನು ಕಾಣಬಹುದು. ಯೋಗದ ಶಕ್ತಿ ನಮ್ಮೊಳಗಿನ ಶಕ್ತಿ – ಇದನ್ನು ಅರಿತು, ಅನುಸರಿಸೋಣ. ಎಂದರು
ದೈಹಿಕ ಶಿಕ್ಷಕರಾದ ಮಂಜುನಾಥ್ ನಾಯ್ಕ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಯೋಗಾಸನ ಪ್ರಾತ್ಯಕ್ಷಿಕೆಯನ್ನು ಪ್ರಾಯೋಗಿಕವಾಗಿ ತಿಳಿಸಿದರು
ವಿದ್ಯಾರ್ಥಿನಿ ರಕ್ಷಾ ಯೋಗಾಸನದ ಮಹತ್ವವನ್ನು ತಿಳಿಸಿದರು ವಿದ್ಯಾರ್ಥಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು
ವಿದ್ಯಾರ್ಥಿಗಳಾದ ಅನುಶ್ರೀ ಸ್ವಾಗತಿಸಿದರು , ಸಾನಿಕಾ ವಂದಿಸಿದರು ಹಾಗೂ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.






