JANANUDI.COM NETWORK

ಬಸ್ರೂರು ಅಪ್ಪಣ್ಣ ಹೆಗ್ಡೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕುಂದಾಪುರ ತಾಲೂಕಿನ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ, ಉನ್ನತ ಶಿಕ್ಷಣಕ್ಕೆ ಸೇರ್ಪಡೆಗೊಂಡಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನ ಡಿ. 24ರಂದು ವಿತರಣೆ ಮಾಡಲಾಗುತ್ತದೆ.
ಪ್ರಥಮ ವರ್ಷದ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಸೇರಿದಂತೆ ಪದವಿ ನಂತರದ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುವ ಅರ್ಹ, ಆರ್ಥಿಕವಾಗಿ ಹಿಂದುಳಿದ, ಕುಂದಾಪುರ ಮತ್ತು ಬೈಂದೂರು ತಾಲೂಕಿನ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಕೈ ಬರಹದಲ್ಲಿ ಅರ್ಜಿ ಸಲ್ಲಿಸಿ ಅಂಕ ಪಟ್ಟಿ, ಕಾಲೇಜಿನ ಸೇರ್ಪಡೆ ಆದ ದಾಖಲೆ ಸೇರಿದಂತೆ ಸೂಕ್ತ ವಿವರಗಳನ್ನು ಡಿ. 12ರ ಒಳಗೆ ಬಿ ರಾಮ್‍ಕಿಶನ್ ಹೆಗ್ಡೆ, ಬಿ ಅಪ್ಪಣ್ಣ ಹೆಗ್ಡೆ ಚಾರಿಟೆಬಲ್ ಟ್ರಸ್ಟ್ ಬಸ್ರೂರು ವಿಳಾಸಕ್ಕೆ ಕಳುಹಿಸಬೇಕೆಂದು ಎಂದು ಟ್ರಸ್ಟಿ ರಾಮಕಿಶನ್ ಹೆಗ್ಡೆ ತಿಳಿಸಿದ್ದಾರೆ.