ಕೋಲಾರ,ಜೂ.07: ನೀರಾವರಿ ಯೋಜನೆ, ಯುಕವರಿಗೆ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಮೊದಲ ಆಧ್ಯತೆಯನ್ನು ನೀಡುವುದಾಗಿ ಸಂಸದ ಮಲ್ಲೇಶ್ಬಾಬು ಹೇಳಿದರು.
ಮೊದಲ ಬಾರಿಗೆ ಸಂಸತ್ ಪ್ರವೇಶಿಸಿ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ ಜನತೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ 5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದರೆ ಸೂಕ್ತ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ, ಅವರ ಜೊತೆ ಇದ್ದು ಹೇಗೆ ಕೆಲಸ ಮಾಡುತ್ತಾರೆ ಎನ್ನುವ ಅವಕಾಶ ನಮಗೆ ಸಿಗುವುದಲ್ಲೆ ಸ್ಪೂರ್ತಿಯಾಗುತ್ತಾರೆ ಎಂದು ತಿಳಿಸಿದರು.
ಕುಮಾರಸ್ವಾಮಿಯವರಿಗೆ ಯಾವ ಖಾತೆ ನೀಡುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್ ಹಾಗೂ ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ನೀರಾವರಿ ಯೋಜನೆಗಳು ಅನುಷ್ಠನಗೊಳಿಸಲು ಸೂಕ್ತವಾದ ಸಚಿವ ಸ್ಥಾನ ನೀಡಿದರೆ ಉತ್ತಮ ಎಂದು ತಿಳಿಸಿದರು.
ಕಳೆದ 5 ವರ್ಷಗಳಲ್ಲಿ ಬಿಜೆಪಿ ಸಂಸದರಾಗಿದ್ದ ಎಸ್ ಮುನಸ್ವಾಮಿ ಅವರು ಕ್ಷೇತ್ರಕ್ಕೆ ಬೇಕಾದ ಅಭಿವೃದ್ದಿಗಳ ಪಟ್ಟಿಯನ್ನು ಕೊಟ್ಟಿದ್ದಾರೆ ಸಮಯದ ಅಭಾವದಿಂದ ಅದನ್ನು ಇನ್ನು ನೋಡಿಲ್ಲ ಈಗಾಗಲೇ ಅವರು ಕೈಗೆತ್ತಿಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಪೂರೈಸಲು ಪ್ರಾಮಾಣಿ ಪ್ರಯತ್ನವನ್ನು ಮಾಡುತ್ತೇನೆ, ನೀರಾವರಿ ಯೋಜನೆ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎನ್ನುವುದು ನನ್ನ ಮೊದಲ ಆಧ್ಯತೆ ಎಂದು ವಿವರಿಸಿದರು.
ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ 30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಹರಿಸಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು, ಕೋಲಾರ ಗಡಿಯಾದ ವಿ.ಕೋಟ ಪಲಮನೇರು ಭಾಗದಲ್ಲಿ ಹರಿಯುತ್ತಿರುವ ಕೃಷ್ಟ ನದಿ ನೀರನ್ನು ಕೋಲಾರಕ್ಕೆ ತರುವ ಬಗ್ಗೆ ಎನ್.ಡಿ.ಎ ಮೈತ್ರಿಯಲ್ಲಿ ಭಾಗವಾಗಿರುವ ಟಿಡಿಪಿ ಅವರ ಜೊತೆ ಮಾತನಾಡಲು ಒಳ್ಳೆಯ ಅವಕಾಶ ಲಭಿಸಿದೆ ಆಂದ್ರದ ಟಿಡಿಪಿ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ಕೃಷ್ಣಾ ನದಿ ನೀರನ್ನು ಕೋಲಾರಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿಗಳ ಮೇಲೆ ಒತ್ತಡ ಹಾಕಿ ಈ ಯೋಜನೆ ಜಾರಿಗೆ ತರಲು ರೂಪು ರೇಷೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಲೋಕ ಚುನಾವಣೆಯಲ್ಲಿ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎನ್ನುವ ನಂಬಿಕೆ ಇತ್ತು ಆದರೆ ಕೆಜಿಎಫ್ ಕ್ಷೇತ್ರದಲ್ಲಿ 30 ಸಾವಿರ ಮತಗಳ ಹಿನ್ನಡೆಯಾಗಿದೆ ಬಂಗಾರಪೇಟೆ ಕ್ಷೇತ್ರದ ಜನತೆ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಈ ಮೊದಲೇ ಇತ್ತು ಅದರಂತೆ ಇಪ್ಪತ್ತೆಂಟು ಸಾವಿರ ಮತಗಳನ್ನು ಮುನ್ನಡೆ ನೀಡಿದ್ದಾರೆ ಅವರಿಗೆ ನಾನು ಚಿರರುಣಿಯಾಗಿರುತ್ತೇನೆ
ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇಂದು ಫಲಿತಾಂಶವಾಗಿ ನಮಗೆ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು.