ಕೋಲಾರ ; ಜಿಲ್ಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಸಂತಸದ ವಿಷಯ. ಕನ್ನಡ ರಾಜ್ಯೋತ್ಸವ ಮತ್ತು ಕನ್ನಡಾಭಿಮಾನ ಬರಿ ನವೆಂಬರ್ ಮಾಸಕ್ಕೆ ಸೀಮಿತವಾಗದೆ ಪ್ರತಿದಿನವೂ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತೋಟಗಾರಿಕೆ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ತಿಳಿಸಿದರು.
ಇಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 67 ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕೊಲಾರ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹನವನ್ನು ನೆರೆವೇರಿಸುವುದು ನನ್ನ ಸೌಭಾಗ್ಯ. ಕರ್ನಾಟಕ ಏಕೀಕರಣವಾಗಲು ಅನೇಕ ನಾಯಕರ ಶ್ರಮವಿದೆ. ಕನ್ನಡ ಭಾμÉ, ಕನ್ನಡ ನೆಲ, ಸಂಸ್ಕøತಿಗೆ ತನ್ನದೇ ಆದ ವಿಶಿಷ್ಟ ಗೌರವವಿದೆ ಎಲ್ಲರಿಗೂ ಒಳ್ಳೆಯದಾಗಲಿ ಕೋಲಾರ ಜಿಲ್ಲೆಯನ್ನು ಒಂದು ಮಾದರಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸೋಣ ಎಂದು ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಕ್ರೀಡಾಂಗಣದಲ್ಲಿ ಆಚರಣೆ ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ. 50 ವರ್ಷಗಳ ನಂತರ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಇದೇ ಮೊದಲು ಮುಂದಿನ ವರ್ಷ 68ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಇನ್ನು ವಿಜೃಂಭಣೆಯಿಂದ ಆಚರಿಸೋಣ, ಕನ್ನಡ ಭಾμÉ ಮತ್ತು ಕನ್ನಡ ಸಂಸ್ಕೃತಿಗೆ ಶಾಸ್ತ್ರೀಯ ಸ್ಥಾನ ಮಾನ ಸಿಕ್ಕಿದೆ. ಈ ಕನ್ನಡ ನೆಲದಲ್ಲಿ ಅನೇಕ ಸಾಹಿತಿಗಳು, ವಿದ್ವಾಂಸರು ಹುಟ್ಟಿ ಬೆಳೆದು ಕನ್ನಡವನ್ನು ಉಳಿಸಲು ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ವಿಧಾನಪರಿಷತ್ ಸದಸ್ಯರಾದ ಎಂಎಲ್ ಅನಿಲ್ ಕುಮಾರ್ ಅವರು ಮಾತನಾಡಿ 1956 ರಲ್ಲಿ ಕರ್ನಾಟಕ ಏಕೀಕರಣವಾಗಿ ನಂತರ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ಇದಕ್ಕೆ ಅನೇಕ ನಾಯಕರ ಹೋರಾಟದ ಪ್ರತಿಫಲ. ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕøತಿಗೆ ಅನೇಕ ಸಾಹಿತಿಗಳ ಕೊಡುಗೆ ಹೆಚ್ಚಿದೆ. ಜ್ಞಾನಪೀಠ ಪ್ರಶಸ್ತಿ ಪಡೆದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಮತ್ತು ಡಿ.ವಿ.ಗುಂಡಪ್ಪ ನವರು ನಮ್ಮ ಜಿಲ್ಲೆಯವರಾಗಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.
ನಂತರ ವಿವಿಧ ಇಲಾಖೆಗಳು ಹಾಗೂ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ಗಳಿಂದ ಸ್ತಬ್ದಚಿತ್ರಗಳ ಮೆರವಣಿಗೆಗೆ ಗಣ್ಯರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ 2022-23ನೇ ಸಾಲಿನ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ, ನಗರಸಭಾ ಅಧ್ಯಕ್ಷೆ ಶ್ವೇತ ಶಬರೀಶ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ್, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕ ವೈ.ಸಂಪಂಗಿ, ದಿಶಾ ಸಮಿತಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಿ.ದೇವರಾಜ್, ಅಪರ ಜಿಲ್ಲಾಧಿಕಾರಿ ಡಾ|| ಸಿ.ವಿ.ಸ್ನೇಹ, ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಿ, ಜಿಲ್ಲಾ ಪಂಚಾಯತಿ ಉಪಕಾರದರ್ಶಿ ಲಕ್ಷ್ಮಿ, ಪೌರಾಯುಕ್ತೆ ಸುಮ, ಕೋಲಾರ ತಹಶೀಲ್ದಾರ್ ನಾಗರಾಜ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕಿ ಶ್ರುತಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್ಬಾಬು, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್.ತ್ಯಾಗರಾಜು, ಕನ್ನಡಪರ ಸಂಘಟನೆಗಳ ಹೋರಾಟಗಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.