

ಜ.22 : ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವರ್ಣ ಪಲ್ಲಕ್ಕಿ ಉತ್ಸವ ಕುಂದಾಪುರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾನ ನಡೆಯುವ ಅಂಗವಾಗಿ ವಿಶೇಷ ಪೂಜೆ ಹಾಗೂ ದೀಪಾವಳಿ ಆಚರಣೆ ನಡೆಯಲಿದೆ. ಮುಂಜಾನೆಯಿಂದ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಸ್ವರ್ಣ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿದೆ. ರಾತ್ರಿ ಉತ್ಸವದ ನಂತರ ದೇವಸ್ಥಾನದಲ್ಲಿ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಈ ದಿನ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಗೂ ಸ್ವರ್ಣಪಲ್ಲಕ್ಕಿ ಉತ್ಸವದಲ್ಲೂ ಸಮಾಜ ಬಾಂಧವರು ಭಾಗವಹಿಸಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.