

ಶ್ರೀನಿವಾಸಪುರ: ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ ಆಗ್ರಹಿಸಿ ಸೆ.21 ರಂದು ಪಟ್ಟಣದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿದೆ ಎಂದು ಜಾಥಾ ಆಯೋಜಕ ಜೆವಿ ಕಾಲೋನಿ ವೆಂಕಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಜಮೀನು ಪರಭಾರೆ ನಿಷೇಧ ಕಾಯ್ದೆ 1978ಕ್ಕೆ ಕಾಲ ಮಿತಿ ಅನ್ವಯಿಸದಂತೆ ತಿದ್ದುಪಡಿ ಮಾಡುವಂತೆ ಒತ್ತಾಯಿಸಲು ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ಜಾಥಾ ಹೊರಡಲಾಗುವುದು ಎಂದು ತಿಳಿಸಿದ್ದಾರೆ.