

ಮಂಗಳೂರು, ಮಾ.13, 2024: ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಅವರು ಮಾರ್ಚ್ 12ರಂದು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಸದಾನಂದ ಗೌಡ ಅವರು ಈ ಸಂದರ್ಭದಲ್ಲಿ ರಾಜೀನಾಮೆ ನೀಡಿದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಹೆಗ್ಡೆ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ್ದರು. ನಂತರ ಬಿಜೆಪಿಗೆ ಸೇರಿದ್ದ ಅವರನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಸದ್ಯ ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧೆ ಮಾಡಲಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಜೊತೆ ಬಿಜೆಪಿಯ ಇನ್ನಿಬ್ಬರು ಬೈಂದೂರಿನ ಮಾಜಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಕಾಂಗ್ರೆಸ್ ಸೇರಿದರು. ಪಕ್ಷದ ಶಾಲು ಹಾಕಿ, ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೆ.ಜೆ ಜಾರ್ಜ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.